‘ಕನ್ನಡಕ್ಕಾಗಿ ನಾವು’ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಕನ್ನಡ ಗೀತ ಗಾಯನ.

ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಕನ್ನಡ ಗೀತ ಗಾಯನ

“ಕನ್ನಡಕ್ಕಾಗಿ ನಾವು” ಕರ್ನಾಟಕ ರಾಜ್ಯೋತ್ಸವ ಅಭಿಯಾನ ಅಂಗವಾಗಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಂದ ಕನ್ನಡ ಗೀತಗಾಯನ ಕಾರ್ಯಕ್ರಮ ನಡೆಯಿತು.ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ, ನಿಸಾರ್ ಅಹಮದ್ ಬರೆದಿರುವ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖರವರ ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಗೀತೆಯನ್ನು ವಿದ್ಯಾರ್ಥಿಗಳ ಜೊತೆಗೆ ಕಾಲೇಜು ಸಿಬ್ಬಂದಿಗಳು ಹಾಡಿದರು. ಕಾರ್ಯಕ್ರಮದ ಮೊದಲಿಗೆ ಪ್ರಾಸ್ತವಿಕವಾಗಿ ಮಾತನಾಡಿದ ಕಾವೇರಿ ಕಾಲೇಜು ಪ್ರಾಂಶುಪಾಲರಾದ ಪ್ರೊ.ಎಂ.ಬಿ ಕಾವೇರಪ್ಪ ನವರು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನವನ್ನು ಮೈಗೂಡಿಸಿಕೊಂಡು ಕರ್ನಾಟಕದಲ್ಲಿ ಕನ್ನಡವನ್ನು ಬಳಸಿ ಕನ್ನಡವನ್ನು ಬೆಳೆಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪ್ರತಿಜ್ಞಾವಿಧಿ ಬೋಧಿಸಿದರು. ಕಾವೇರಿ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.